ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಉತ್ತರಾಖಂಡ ಕಾಂಗ್ರೆಸ್ ಶಾಸಕ ರಾಜಕುಮಾರ್ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ ರಾಜಕುಮಾರ್, ಕಾಂಗ್ರೆಸ್ ದಲಿತರನ್ನು ದುಡಿಮೆಗಳ ಮೇಲೆ ಅವಲಂಬಿತರನ್ನಾಗಿಸಿದೆ. ಆದರೆ ಬಿಜೆಪಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೆಲಸ ಮಾಡಿದೆ ಎಂದರು.
ಈ ಹಿಂದೆಯೂ ಇವರು, ಕೋವಿಡ್-19 ವೇಳೆ ಬಡವರಿಗೆ ಉಚಿತ ಧಾನ್ಯಗಳನ್ನು ಒದಗಿಸಿದ್ದಕ್ಕಾಗಿ ಮತ್ತು ಅಭಿವೃದ್ಧಿ ಕ್ರಮಗಳನ್ನು ಕೈಗೊಂಡಿದ್ದಕ್ಕಾಗಿ ಮೋದಿ ಸರ್ಕಾರವನ್ನು ಶ್ಲಾಘಿಸಿದ್ದರು.ಇತ್ತೀಚೆಗೆ, ಪಕ್ಷೇತರ ಶಾಸಕರಾದ ಪ್ರೀತಂಸಿಂಗ್ ಪನ್ವಾರ್ ಕೂಡ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.