ಉತ್ತರಖಂಡದಲ್ಲೂ ಅರಳಲಿದೆ ಕಮಲ: 47 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ, ಸಿಎಂಗೆ ಹಿನ್ನಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉತ್ತರಖಂಡದಲ್ಲಿ ಆಡಳಿತರೂಢ ಪಕ್ಷ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಏರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.
ರಾಜ್ಯದಲ್ಲಿನ 70 ವಿಧಾನಸಭೆ ಸ್ಥಾನಗಳಲ್ಲಿ 47 ಕಡೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ಕೇವಲ 19 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಒಟ್ಟು 36 ಸದಸ್ಯರ ಮ್ಯಾಜಿಕ್‌ ನಂಬರ್‌ ನ ಬಲ ಪಕ್ಷಕ್ಕೆ ಅಗತ್ಯವಿದೆ.
ಇನ್ನು ಕಥಿಮಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್ ಧಾಮಿ ಅವರು 5000 ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ.
ಇನ್ನು ಕಳೆದ 22 ವರ್ಷಗಳಿಂದ ಯಾವುದೇ ಆಡಳಿತರೂಢ ಪಕ್ಷ ಎರಡನೇ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿರಲಿಲ್ಲ. ಆದರೆ ಈ ನಿಯಮಕ್ಕೆ ಉತ್ತರಖಂಡದ ಜನ ಹೊಸ ತಿರುವು ಕೊಟ್ಟಿದ್ದು, ರಾಜ್ಯದಲ್ಲಿ ಮತ್ತೆ ಬಿಜೆಪಿ ಆಡಳಿತಕ್ಕೆ ಬರುವಂತೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!