Friday, June 2, 2023

Latest Posts

ಚಾರ್‌ಧಾಮ್ ಯಾತ್ರೆಗೆ ಉತ್ತರಾಖಂಡ್ ಸಿದ್ಧತೆ: ಸಿಎಂ ಧಾಮಿ ಅಧ್ಯಕ್ಷತೆಯಲ್ಲಿ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಂಬರುವ ಚಾರ್‌ಧಾಮ್ ಯಾತ್ರೆಯನ್ನು ಗಮನದಲ್ಲಿಟ್ಟುಕೊಂಡು, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಕಾಲದಲ್ಲಿ ಅಗತ್ಯ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರಿಗೆ ಚಾರ್‌ಧಾಮ್ ಯಾತ್ರೆಗೆ ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ಸಭೆ ಆಯೋಜಿಸಿ ಅಗತ್ಯ ಸಿದ್ಧತೆಗಳನ್ನು ಅಂತಿಮಗೊಳಿಸುವಂತೆ ಮುಖ್ಯಮಂತ್ರಿ ಸೂಚಿಸಿದರು. ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ರಾಜ್ಯಕ್ಕೆ ಆಗಮಿಸಲಿದ್ದು, ಈ ದೃಷ್ಟಿಯಿಂದ ಮುಂಚಿತವಾಗಿ ವ್ಯವಸ್ಥೆ ಮಾಡುವುದು ಅಗತ್ಯವಾಗಿದೆ ಎಂದು ಧಾಮಿ ಹೇಳಿದರು.

ಏಪ್ರಿಲ್ 15 ರೊಳಗೆ ಪ್ರಯಾಣದ ವ್ಯವಸ್ಥೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಾತ್ರಾ ಮಾರ್ಗದ ರಸ್ತೆಗಳ ಸುಧಾರಣೆಯ ಜೊತೆಗೆ ಪ್ರಯಾಣಿಕರ ಅನುಕೂಲಕ್ಕೆ ಸಂಬಂಧಿಸಿದ ವ್ಯವಸ್ಥೆಗಳ ಬಗ್ಗೆ ಪರಿಣಾಮಕಾರಿ ಕ್ರಿಯಾ ಯೋಜನೆಯೊಂದಿಗೆ ಕೆಲಸ ಮಾಡಲು ಮುಖ್ಯಮಂತ್ರಿ ಸೂಚನೆ ನೀಡಿದರು.

ಕೇದಾರನಾಥ ಧಾಮದ ಬಾಗಿಲು ಏಪ್ರಿಲ್ 25 ರಂದು ಮತ್ತು ಬದರಿನಾಥ ಧಾಮದ ಬಾಗಿಲು ಏಪ್ರಿಲ್ 27 ರಂದು ತೆರೆಯುತ್ತದೆ.
ಏಪ್ರಿಲ್ 22 ರಂದು ಅಕ್ಷಯ ತೃತೀಯದಿಂದ ಭಕ್ತರಿಗೆ ದೇವಾಲಯದ ಬಾಗಿಲು ತೆರೆಯಲಾಗುವುದು ಎಂದು ಗಂಗೋತ್ರಿ ದೇವಾಲಯ ಸಮಿತಿ ಪ್ರಕಟಿಸಿದೆ. ರುದ್ರಪ್ರಯಾಗ ಜಿಲ್ಲಾಡಳಿತ ಚಾರ್‌ಧಾಮ್ ಯಾತ್ರೆಗೆ ಸಿದ್ಧತೆ ಆರಂಭಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!