ಹೊಸದಿಗಂತ ಡಿಜಿಟಲ್ ಡೆಸ್ಕ್ :
ಉತ್ತರಾಖಂಡ ಹಣಕಾಸು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರೇಮ್‌ಚಂದ್ ಅಗರ್ವಾಲ್ ಅವರು ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅಗರ್ವಾಲ್ ಅವರು ಅಜಾಗರೂಕತೆಯಿಂದ ಬೆಟ್ಟದ ನಿವಾಸಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ರಾಜೀನಾಮೆ ನೀಡಲಾಗಿದೆ.
ಪ್ರೇಮ್‌ಚಂದ್ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆದಿತ್ತು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಅಗರ್ವಾಲ್ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯದ ಎಲ್ಲಾ ನಿವಾಸಿಗಳ ಪ್ರೀತಿ ಮತ್ತು ಆಶೀರ್ವಾದಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಈ ಬೆಂಬಲದ ಹೊರತಾಗಿಯೂ, ರಾಜ್ಯದಲ್ಲಿ ಸೃಷ್ಟಿಯಾಗಿರುವ ವಾತಾವರಣದಿಂದ ನನಗೆ ತೀವ್ರ ಬೇಸರವಾಗಿದೆ ಎಂದು ಅವರು ಭಾವುಕರಾಗಿ ಹೇಳಿದರು.