ಹೊಸದಿಗಂತ ಡಿಜಿಟಲ್ ಡೆಸ್ಕ್
ಉತ್ತರಾಖಂಡದಲ್ಲಿ ಭಾರಿ ಮಳೆಗೆ ಭೀಕರ ಅವಘಡವೊಂದು ಸಂಭವಿಸಿದೆ. ರಾಜ್ಯದ ನೈನಿತಾಲ್ ಜಿಲ್ಲೆಯ ರಾಮನಗರ ಎಂಬಲ್ಲಿ ಧೇಲಾ ನದಿಯ ಪ್ರವಾಹದ ಸೆಳೆತಕ್ಕೆ ಸಿಲುಕಿದ ಎರ್ಟಿಗಾ ಕಾರೊಂದು ಕೊಚ್ಚಿಹೋದ ಪರಿಣಾಮ 9 ಮಂದಿ ಪ್ರವಾಸಿಗರು ಜಲಸಮಾಧಿಯಾಗಿದ್ದಾರೆ.
ಶುಕ್ರವಾರ ಮುಂಜಾನೆ ಅಬ್ಬರಿಸಿದ ಮಳೆಯಿಂದಾಗಿ ನದಿಯಲ್ಲಿ ಭಾರೀ ಪ್ರಮಾಣದ ನೀರು ಹರಿದು ಬಂದಿತ್ತು. ಮುಂಜಾನೆ 5 ಗಂಟೆ ಸುಮಾರಿಗೆ ಕಾರ್ಬೆಟ್ ಕಡೆಗೆ ಹೋಗುತ್ತಿದ್ದ ವಾಹನ ಧೇಲಾ ನದಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದೆ. ಕಾರಿನಲ್ಲಿದ್ದ ಪಂಜಾಬ್ ಮೂಲಕ ಒಂಬತ್ತು ಪ್ರಯಾಣಿಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇಬ್ಬರು ಪ್ರವಾಸಿಗರನ್ನು ರಕ್ಷಿಸಲಾಗಿದೆ ಎಂದು ಕುಮಾವೂನ್ ರೇಂಜ್ ನ ಡಿಐಜಿ ಆನಂದ್ ಭರನ್ ಖಚಿತಪಡಿಸಿದ್ದಾರೆ
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ