ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದ ಪಿಥೋರಗಢ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದೆ. ಇದರಿಂದಾಗಿ ಸೇತುವೆಯೊಂದು ಕೊಚ್ಚಿಕೊಂಡು ಹೋಗಿದೆ.
ಜಿಲ್ಲೆಯ ಧಾರ್ಚುಲಾ ಪಟ್ಟಣದ ಚಾಲ್ ಗ್ರಾಮದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುತ್ತಿದ್ದ ಸೇತುವೆಯೇ ಕೊಚ್ಚಿಕೊಂಡು ಹೋಗಿರುವುದರಿಂದಾಗಿ ಗ್ರಾಮದಲ್ಲಿರುವ ನೂರಾರು ಜನರು ಪರದಾಡುವಂತಾಗಿದೆ. ಅಲ್ಲದೇ ಸುಮಾರು 200ಕ್ಕೂ ಅಧಿಕ ಮಂದಿ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಉತ್ತರಾಖಂಡದ ಕೆಲವು ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಎಚ್ಚರಿಕೆ ನೀಡಿದೆ.