ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡ ದುರಂತಕ್ಕೆ ಸಂಬಂಧಿಸಿ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿರುವ ಬೆನ್ನಿಗೇ ಕರ್ನಾಟಕ ಸರ್ಕಾರ, ಉತ್ತರಾಖಂಡ ಸರ್ಕಾರದ ಜೊತೆ ಸತತ ಸಂಪರ್ಕದಲ್ಲಿದ್ದು, ಪ್ರತೀ ಬೆಳವಣಿಗೆ ಬಗ್ಗೆ ಕಾಳಜಿ ವಹಿಸಿದೆ.
ಸರ್ಕಾರ ಅಲ್ಲಿನ ಅಧಿಕಾರಿಗಳು ಹಾಗೂ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದ್ದು, ಮೃತಪಟ್ಟವರ ಮಾಹಿತಿ ಸಂಗ್ರಹಿಸಿ ಸ್ಥಳೀಯ ಅಧಿಕಾರಿಗಳು, ಖಾಸಗಿ ಏಜೆನ್ಸಿ ಜೊತೆ ಮರುದೃಢೀಕರಿಸಲು ಪ್ರಯತ್ನಿಸುತ್ತಿದೆ.
ಈ ನಡುವೆ ಗರ್ವಾಲ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆಯ ಸಮನ್ವಯಕ್ಕಾಗಿ ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಡೆಹ್ರಾಡೂನ್ ಪ್ರಯಾಣ ಬೆಳೆಸುತ್ತಿದ್ದಾರೆ.