Monday, October 2, 2023

Latest Posts

CRIME| ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ಉಸಿರಾಡುತ್ತಿದ್ದವಳನ್ನೇ ಸುಟ್ಟು ಕೊಂದ ಕಾಮುಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಿದ್ಯಾರ್ಥಿನಿಯನ್ನು ಕಿಡ್ನಾಪ್ ಮಾಡಿ ಸಾಮೂಹಿಕ ಅತ್ಯಾಚಾರಗೈದ ಬಳಿಕ  ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

ವಿವರಗಳಿಗೆ ಹೋಗುವುದಾದರೆ..ಬಹ್ರಿ ಗ್ರಾಮದ ಮಹಾವೀರ್ ಎಂಬ ಯುವಕ ಉತ್ತರ ಪ್ರದೇಶದ ಜೈಸಿಂಗ್‌ಪುರದ ವಿದ್ಯಾರ್ಥಿನಿ ಮೇಲೆ ಕಣ್ಣಿಟ್ಟಿದ್ದು, ಈ ವರ್ಷದ ಜನವರಿ 30ರಂದು ತನ್ನ ಸ್ನೇಹಿತರ ಸಹಾಯದಿಂದ ಆಕೆಯನ್ನು ಅಪಹರಿಸಿ ವಿದ್ಯಾರ್ಥಿಯನ್ನು ಗುಜರಾತ್‌ನ ಸೂರತ್‌ಗೆ ಕರೆದೊಯ್ಯಲಾಯಿತು. ಇತ್ತ ಮಗಳು ಕಾಣದೆ ಕಂಗಾಲಾದ ತಂದೆ ಪೊಲೀಸರ ಮೊರೆ ಹೋಗಿದ್ದು, ಬಾಲಕಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಮೇಲೆ ಅನುಮಾನ ಇದೆ ಎಂದು ದೂರು ದಾಖಲಿಸಿದ್ದರು.

ದುಷ್ಕರ್ಮಿಗಳು ಯುವತಿಯನ್ನು ಕಿಡ್ನಾಪ್ ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಆ ಬಳಿಕ ವಿದ್ಯಾರ್ಥಿನಿಯನ್ನು ಅಪಹರಿಸಿದ್ದ ಮಹಾವೀರ್ ಸಂತ್ರಸ್ತೆಯ ತಂದೆಗೆ ಕರೆ ಮಾಡಿ ʻನಿಮ್ಮ ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆʼ ಎಂದು ಸ್ವತಃ ಆತನೇ ಮಾಹಿತಿ ಕೊಟ್ಟಿದ್ದಾನೆ. ಹೀಗೊಂದು ಕರೆ ಬಂದಿರುವುದಾಗಿ ಸಂತ್ರಸ್ತೆಯ ತಂದೆ ಸುಲ್ತಾನ್‌ಪುರ ಪೊಲೀಸರಿಗೆ ಮಾರ್ಚ್ 29 ರಂದು ವಿಷಯ ಮುಟ್ಟಿಸಿದ್ದು, ಕೂಡಲೇ ಪೊಲೀಸರು ಯುವತಿಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಕಳೆದೆರಡು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಇದೀಗ ಸಾವನ್ನಪ್ಪಿದ್ದಾಳೆ. ಇದರಿಂದ ಸ್ಥಳೀಯರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ಆರಂಭಿಸಿದ್ದು, ಆರೋಪಿಗಳನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!