ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದಲ್ಲಿ ಹವಾಮಾನ ವೈಪರಿತ್ಯ ಹಿನ್ನೆಲೆ ಚಾರಣಕ್ಕೆ ಹೋಗಿದ್ದ 9 ಚಾರಣಿಗರು ಮೃತಪಟ್ಟಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲು ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ, ಉತ್ತರಾಖಂಡ ರಾಜ್ಯದ ಸಹಸ್ತ್ರ ತಾಲ್ ಚಾರಣಕ್ಕೆ ರಾಜ್ಯದ 22 ಚಾರಣಿಗರು ತೆರಳಿದ್ದರು. ಹವಾಮಾನ ವೈಪರೀತ್ಯಕ್ಕೆ ಸಿಲುಕಿ, ಅವರಲ್ಲಿ 9 ಚಾರಣಿಗರು ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಸಾಹಸ ಪ್ರವೃತ್ತಿಯ ಚಾರಣಿಗರು ಇಂಥ ಅಪಾಯದ ಸ್ಥಿತಿಗೆ ಸಿಲುಕಿದ್ದು ದುರ್ದೈವದ ಸಂಗತಿ. ಇನ್ನೂ ಹಲವರು ಕಣ್ಮರೆಯಾಗಿದ್ದು, ಅವರೆಲ್ಲರೂ ಕ್ಷೇಮವಾಗಿ ಮರಳಿಬರಲಿ ಎಂದು ಪ್ರಾರ್ಥಿಸುತ್ತೇನೆ. ಜೀವ ಕಳೆದುಕೊಂಡ ಎಲ್ಲಾ ಚಾರಣಿಗರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.