ಉತ್ತರಕಾಶಿ ಸುರಂಗ ಕುಸಿತ: ರಕ್ಷಣಾ ಕಾರ್ಯಾಚರಣೆ ಪರಿಶೀಲಿಸಿದ ನಿತಿನ್ ಗಡ್ಕರಿ, ಸಿಎಂ ಧಾಮಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಉತ್ತರಕಾಶಿಯ ಸುರಂಗ ಕುಸಿತದಿಂದ ಅಲ್ಲಿ ಸಿಲುಕಿರುವ 40 ಕಾರ್ಮಿಕರನ್ನು ರಕ್ಷಿಸಲು ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗಳ ನಡುವೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನಾ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಸ್ತುತ ಸಿಲ್ಕ್ಯಾರಾದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ ಕುರಿತು ಎಎನ್‌ಐ ಜತೆ ಮಾತನಾಡಿದ ಸಿಎಂ ಧಾಮಿ, ಲಭ್ಯವಿರುವ ಎಲ್ಲಾ ಸಾಧ್ಯತೆಗಳ ಬಗ್ಗೆ ಕೆಲಸ ಮಾಡುತ್ತಿದ್ದು, ಎಲ್ಲಾ ರೀತಿಯ ತಜ್ಞರ ತಂಡ ಇಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ.

ಅಗತ್ಯವಿರುವ ಎಲ್ಲಾ ನೆರವು ನೀಡಲು ಸಿದ್ಧ
‘ಎಲ್ಲರ ಜೀವ ಉಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ರಾಜ್ಯ ಸರ್ಕಾರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸಂಸ್ಥೆಗಳಿಗೆ ಅಗತ್ಯವಿರುವ ಎಲ್ಲಾ ನೆರವು ನೀಡಲು ಸಿದ್ಧವಿದೆ. ಕಾರ್ಯಾಚರಣೆಗೆ ಆಡಚಣೆ ಹೆಚ್ಚುತ್ತಿದೆ. ಅಪಾಯದಲ್ಲಿ ಸಿಲುಕಿರುವವರು ಬೇಗ ಪಾರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಧಾಮಿ ಹೇಳಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!