ವಿ.ಮನೋಹರ್‌ ನಿರ್ದೇಶನದ ‘ದರ್ಬಾರ್‌’ ಜೂ.09ಕ್ಕೆ ತೆರೆಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸಂಗೀತ ನಿರ್ದೇಶಕ ವಿ.ಮನೋಹರ್‌ ನಿರ್ದೇಶಿಸಿರುವ “ದರ್ಬಾರ್‌’ ಚಿತ್ರ ಬಿಡುಗಡೆಯ ಹಂತಕ್ಕೆ ತಲುಪಿದ್ದು, ಚಲನಚಿತ್ರವು ಜೂನ್‌ 09ರಂದು ತೆರೆಕಾಣುವ ನಿರೀಕ್ಷೆಯಿದೆ.

ಸತೀಶ್‌ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದು, ಬಿ.ಎನ್‌. ಶಿಲ್ಪ ಅವರು ನಿರ್ಮಾಣ ಮಾಡಿದ್ದಾರೆ. ಮಾಸ್‌ ಮಾದ, ವಿನೋದ್‌ ಮೂರು ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ. ಹಿರಿಯ ಕಲಾವಿದರಾದ ಎಂ.ಎನ್‌. ಲಕ್ಷ್ಮೀದೇವಿ, ಅಶೋಕ್‌ ಹೀಗೆ ಸಾಕಷ್ಟು ಜನ ಅಭಿನಯಿಸಿದ್ದಾರೆ.

ಮೂರು ಹಾಡುಗಳು ಚಿತ್ರದಲ್ಲಿದ್ದು, ಟೈಟಲ್‌ ಸಾಂಗನ್ನು ಚಂದನ್‌ ಶೆಟ್ಟಿ ಹಾಡಿದ್ದಾರೆ, ರಾಜಕೀಯ ವಿಡಂಬನೆಯ ಹಾಡನ್ನು ಉಪೇಂದ್ರ ಹಾಡಿದ್ದಾರೆ, ಇನ್ನು ಡ್ಯುಯೆಟ್‌ ಹಾಡಿಗೆ ಜಯಂತ್‌ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!