ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ, ಬಾಹ್ಯಾಕಾಶ ಆಯೋಗದ ಅಧ್ಯಕ್ಷ ಮತ್ತು ಇಸ್ರೋ ಅಧ್ಯಕ್ಷರಾಗಿ ವಿ.ನಾರಾಯಣನ್ ಅವರು ಬುಧವಾರ ಅಧಿಕಾರ ವಹಿಸಿಕೊಂಡರು.
ಡಾ.ವಿ.ನಾರಾಯಣನ್ ಅವರು ಜನವರಿ 13ರ ಸಂಜೆ ಇಸ್ರೋ ಬಾಹ್ಯಾಕಾಶ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಬಾಹ್ಯಾಕಾಶ ಕಮಿಷನ್ ಅಧ್ಯಕ್ಷರಾಗಿ ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು.
ಹಿರಿಯ ವಿಜ್ಞಾನಿ ಎಸ್.ಸೋಮನಾಥ್ ಅವರಿಂದ ತೆರವುಗೊಂಡಿದ್ದ ಸ್ಥಾನಕ್ಕೆ ನಾರಾಯಣನ್ ಅವರನ್ನು ನೇಮಕ ಮಾಡಲಾಗಿದೆ.
ಹಿರಿಯ ವಿಜ್ಞಾನಿ ಡಾ.ನಾರಾಯಣನ್ ಅವರು ಇಸ್ರೋದ ಲಿಕ್ವಿಡ್ ಪ್ರೊಪಲ್ಶನ್ ಸಿಸ್ಟಮ್ಸ್ ಸೆಂಟರ್ ನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ನಾರಾಯಣನ್ ಅವರು ಸ್ಪೇಸ್ ಕ್ರಾಫ್ಟ್ ಮತ್ತು ಲಾಂಚ್ ವೆಹಿಕಲ್ಸ್ ನ ಪ್ರೊಪಲ್ಶನ್ ಸಿಸ್ಟಮ್ಸ್ ಅಭಿವೃದ್ದಿಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
1984ರಲ್ಲಿ ಇಸ್ರೋ ಸೇರಿದ್ದ ನಾರಾಯಣನ್ ಅವರು ಭಾರತದ ಬಾಹ್ಯಾಕಾಶ ಸಂಸ್ಥೆಯಲ್ಲಿ ದಶಕಕ್ಕಿಂತಲೂ ಹೆಚ್ಚು ಕಾಲ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. ನಂತರ 2018ರಲ್ಲಿ ಎಲ್ ಪಿಎಸ್ ಸಿ ನಿರ್ದೇಶಕರಾಗಿ ಬಾಹ್ಯಾಕಾಶ ಸಂಸ್ಥೆಯ ಮಹತ್ವದ ಯೋಜನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.