ಹೊಸದಿಗಂತ ವರದಿ, ಕಾಸರಗೋಡು
ಕರ್ನಾಟಕ ಸರಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅನುದಾನದಿಂದ ನೂತನವಾಗಿ ನಿರ್ಮಿಸಲಾದ ಎಡನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲೆಯ ಕನ್ನಡ ಮಾಧ್ಯಮ ಕಟ್ಟಡವನ್ನು ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇಂಧನ ಖಾತೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಶನಿವಾರ ಬೆಳಗ್ಗೆ ಉದ್ಘಾಟಿಸಿ ಶುಭಕೋರಿದರು.
ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ದೀಪ ಬೆಳಗಿಸಿ ಆಶೀರ್ವಚನ ನೀಡಿದರು. ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ, ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ, ಬಿಜೆಪಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು, ಕೇರಳ ರಾಜ್ಯ ಕಾರ್ಯದರ್ಶಿ, ವಕೀಲ ಕೆ.ಶ್ರೀಕಾಂತ್, ಪ್ರಮುಖರಾದ ಟಿ.ಶ್ಯಾಮ ಭಟ್, ಎಸ್.ವಿ.ಭಟ್ ಕಾಸರಗೋಡು ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ