30 ದಿನಗಳ ಒಳಗಡೆ ಮನೆ ಖಾಲಿ ಮಾಡಿ: ಮಹುವಾ ಮೊಯಿತ್ರಾಗೆ ನೋಟಿಸ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಲೋಕಸಭೆಯಿಂದ ಉಚ್ಛಾಟನೆಯಾಗಿರುವ ಟಿಎಂಸಿ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ಶ್ರೀಘ್ರವೇ ತಮ್ಮ ಅಧಿಕೃತ ನಿವಾಸವನ್ನು ತೊರೆಯಲಿದ್ದಾರೆ.

ಲೋಕಸಭೆಯ (Lok Sabha) ವಸತಿ ಸಮಿತಿಯು ನಗರಾಭಿವೃದ್ಧಿ ಸಚಿವಾಲಯಕ್ಕೆ ಪತ್ರ ಬರೆದಿದ್ದು 30 ದಿನಗಳ ಒಳಗಡೆ ತನ್ನ ಅಧಿಕೃತ ನಿವಾಸವನ್ನು ಖಾಲಿ ಮಾಡುವಂತೆ ಕೇಳಿಕೊಳ್ಳುವಂತೆ ಸೂಚಿಸಿದೆ.

ಮೊಯಿತ್ರಾ ಅವರಿಗೆ ವಿಶೇಷ ಕೋಟಾದ ಅಡಿಯಲ್ಲಿ ಸಚಿವಾಲಯವು ಮನೆಯನ್ನು ಮಂಜೂರು ಮಾಡಿದೆ. ಲೋಕಸಭೆಯಿಂದ ಉಚ್ಛಾಟನೆ ಮಾಡಿದ್ದನ್ನು ಪ್ರಶ್ನಿಸಿ ಮೊಯಿತ್ರಾ ಸುಪ್ರೀಂ ಕೋರ್ಟ್‌ನಲ್ಲಿ (Suprme Court) ಅರ್ಜಿ ಸಲ್ಲಿಸಿದ್ದಾರೆ.

ಮೊಯಿತ್ರಾ ಅವರು ಸಂಸತ್ತಿನಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳುವ ಸಲುವಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ 2 ಕೋಟಿ ರೂ. ನಗದು ಮತ್ತು ಐಷಾರಾಮಿ ಉಡುಗೊರೆ ವಸ್ತುಗಳು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!