April 28, 2026
Tuesday, April 28, 2026
spot_img

ರಜೆ ಮಜಾ ಮುಗಿದು ಕೆಲಸದತ್ತ ಚಿತ್ತ: ಹಾಸನ-ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಬಿಸಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯುಗಾದಿ ಹಾಗೂ ರಂಜಾನ್ ಹಬ್ಬದ ಸತತ ರಜೆಗಳನ್ನು ಮುಗಿಸಿ ಸಾರ್ವಜನಿಕರು ಈಗ ರಾಜಧಾನಿ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಇದರಿಂದಾಗಿ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ದಟ್ಟಣೆ ವಿಪರೀತವಾಗಿದ್ದು, ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ.

ಹಬ್ಬದ ಸರಣಿ ರಜೆಗಳ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ತಮ್ಮ ಗ್ರಾಮಗಳಿಗೆ ಹಾಗೂ ವಿವಿಧ ಪ್ರವಾಸಿ ತಾಣಗಳಿಗೆ ತೆರಳಿದ್ದರು. ಸೋಮವಾರದಿಂದ ಕೆಲಸಕ್ಕೆ ಹಾಜರಾಗಬೇಕಿರುವ ಕಾರಣ, ಭಾನುವಾರ ಸಂಜೆಯಿಂದಲೇ ವಾಹನಗಳು ನಗರಕ್ಕೆ ಲಗ್ಗೆ ಇಡುತ್ತಿವೆ. ಪರಿಣಾಮವಾಗಿ ಹಾಸನ – ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಇರುವೆ ಸಾಲಿನಂತೆ ನಿಂತಲ್ಲೇ ನಿಂತಿವೆ.

ಟ್ರಾಫಿಕ್ ಜಾಮ್‌ನಿಂದಾಗಿ ಗಂಟೆಗಟ್ಟಲೆ ರಸ್ತೆಯಲ್ಲೇ ಕಳೆಯುವಂತಾಗಿದ್ದು, ವಾಹನ ಸವಾರರು ಅಕ್ಷರಶಃ ಹೈರಾಣಾಗಿದ್ದಾರೆ. ಅದರಲ್ಲೂ ಟೋಲ್ ಪ್ಲಾಜಾಗಳ ಬಳಿ ವಾಹನಗಳ ಸಾಲು ಮೈಲುದ್ದ ಬೆಳೆದಿದ್ದು, ಸಂಚಾರ ಸುಗಮಗೊಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !