ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಲಸಿಕೆ: ಸಚಿವ ಡಾ.ಕೆ.ಸುಧಾಕರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಲಸಿಕೆ ನೀಡಿ, ರಾಜ್ಯವನ್ನು ಕೊರೋನಾ ಮುಕ್ತಗೊಳಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಲಸಿಕಾ ಮಹಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಅಂತಾರಾಷ್ಟ್ರೀಯ ಯೋಗ ದಿನದಂದೇ ಪ್ರಧಾನಿ ನರೇಂದ್ರ ಮೋದಿಯವರು ಕೋವಿಡ್ ಲಸಿಕೆ ಅಭಿಯಾನ ನಡೆಸಲು ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಒಂದೇ ದಿನ ಸುಮಾರು 7 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಇದೆ. 18-44 ವರ್ಷದವರಿಗೆ ಲಸಿಕೆ ಹಾಗೂ ಎರಡನೇ ಡೋಸ್ ಪಡೆಯುವವರಿಗೂ ಲಸಿಕೆ ನೀಡಲಾಗುತ್ತಿದೆ. ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಲಸಿಕೆ ನೀಡಿ, ರಾಜ್ಯವನ್ನು ಕೊರೋನಾ ಮುಕ್ತಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದರು.
ರಾಜ್ಯದಲ್ಲಿ 15 ಲಕ್ಷಕ್ಕೂ ಅಧಿಕ ಕೋವಿಶೀಲ್ಡ್ ಹಾಗೂ 6-7 ಲಕ್ಷ ಕೋವ್ಯಾಕ್ಸಿನ್ ಲಸಿಕೆ ಸಂಗ್ರಹವಿದೆ. 1.86 ಕೋಟಿ ಜನರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ 13 ಸಾವಿರ ಲಸಿಕಾ ಕೇಂದ್ರಗಳಿವೆ. ಒಂದು ಕೇಂದ್ರದಲ್ಲಿ 70-80 ಜನರಿಗೆ ಲಸಿಕೆ ನೀಡಿದರೂ ನಾವು ಗುರಿ ಮುಟ್ಟಲು ಸಾಧ್ಯವಿದೆ. ಇದಕ್ಕೆ ಜನರ ಸಂಪೂರ್ಣ ಸಹಕಾರ ಬೇಕಿದೆ. ಸ್ಪುಟ್ನಿಕ್ ಲಸಿಕೆ ನೀಡಲು ಅನುಮತಿ ಇದ್ದು, ಈ ಲಸಿಕೆಯ ಲಭ್ಯತೆ ಬಗ್ಗೆ ನೋಡಬೇಕಿದೆ ಎಂದರು.
ಕೋವಿಡ್ ಲಸಿಕೆ ಬಗ್ಗೆ ರಾಜ್ಯದ ಜನರಿಗೆ ಹೆಚ್ಚು ಜಾಗೃತಿ ಇದೆ. ಆರಂಭಿಕ ಹಂತದಲ್ಲಿ ಕೆಲ ಪಕ್ಷಗಳು ಲಸಿಕೆ ಬಗ್ಗೆ ಜನರ ಮನಸ್ಸಿನಲ್ಲಿ ಅಂಜಿಕೆ ಉಂಟುಮಾಡಿದ್ದವು. ಆದರೆ ಕ್ರಮೇಣ ಜನರಿಗೆ ನಂಬಿಕೆ ಬಂದಿದೆ. ಲಸಿಕೆಯೊಂದೇ ಕೊರೋನಾ ನಿವಾರಣೆಗೆ ಸೂಕ್ತ ಪರಿಹಾರ ಎಂಬುದು ಅರಿವಾಗಿದೆ ಎಂದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss