ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಯೋಗಕ್ಷೇಮದ ಕುರಿತು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಡಿಜಿ ಐಜಿಪಿ ಪ್ರವೀಣ್ ಸೂದ್ ಕೆಲವು ಸೂಚನೆಗಳನ್ನು ನೀಡಿದ್ದಾರೆ.
ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಸಿಬ್ಬಂದಿ ಅಗತ್ಯ ಕ್ರಮಗಳನ್ನು ತಪ್ಪದೇ ಪಾಲಿಸುವಂತೆ ಹೇಳಿದ್ದಾರೆ.
- 45 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿ ಮತ್ತವರ ಕುಟುಂಬಸ್ಥರಿಗೆ 2 ಲಸಿಕೆ ಕಡ್ಡಾಯ
- ನಿಯಮಿತವಾಗಿ ಕೋವಿಡ್ ಪರೀಕ್ಷೆಗೆ ಒಳಪಡತಕ್ಕದ್ದು.
- ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರು ಕಚೇರಿ ಕರ್ತವ್ಯಕ್ಕೆ ಮಾತ್ರ ನೇಮಿಸಬೇಕು.\
- ಪೊಲೀಸ್ ಸಿಬ್ಬಂದಿ 3 ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕು.
- ಪೊಲೀಸ್ ಠಾಣೆಗಳ ಹೊರ ಮತ್ತು ಒಳ ಆವರಣಗಳನ್ನು ಸ್ಯಾನಿಟೈಸ್ ಮಾಡತಕ್ಕದ್ದು.
- ಕರ್ತವ್ಯದ ಸಮಯದಲ್ಲಿ ಮಾಸ್ಕ್, ಫೇಸ್ ಶೀಲ್ಡ್ ಕಡ್ಡಾಯ.
- ಪೊಲೀಸ್ ಸಿಬ್ಬಂದಿ ಅವರ ಕುಟುಂಬಸ್ಥರ ನೆರವಿಗೆ ಸಮನ್ವಯಾಧಿಕಾರಿ ನೇಮಿಸತಕ್ಕದ್ದು.
- ಸಾರ್ವಜನಿಕರ ಭೇಟಿಗೆ ಪ್ರತ್ಯೇಕ ವ್ಯವಸ್ಥೆ ಮಾಡತಕ್ಕದ್ದು.
- ಪೊಲೀಸ್ ಸಿಬ್ಬಂದಿಗೆ ಚಿಕಿತ್ಸೆ ನಿರಾಕರಿಸುವ ಆರೋಗ್ಯ ಭಾಗ್ಯದಡಿ ನೋಂದಾಯಿತ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳತಕ್ಕದ್ದು.
- ಪೊಲೀಸ್ ಅಧಿಕಾರಿ, ಸಿಬ್ಬಂದಿ ವಾಹನ ಸ್ಯಾನಿಟೈಸ್ ಮಾಡತಕ್ಕದ್ದು.
- ಅಪರಾಧಿಗಳ ತನಿಖೆ, ದಸ್ತಗಿರಿಗೆ ಈ ಹಿಂದೆ ಅನುಸರಿಸಿದ ಕ್ರಮ ಮುಂದುವರೆಸಬೇಕು.
- ಕೋವಿಡ್ ನಿಯಮಗಳನ್ನ ಕಡ್ಡಾಯವಾಗಿ ಪಾಲಿಸತಕ್ಕದ್ದು.