ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೋವಿಡ್ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ದೇಶದಲ್ಲಿ ಲಸಿಕೀಕರಣ ಮುಂದುವರಿದಿದ್ದು, ಜನ ಲಸಿಕೆ ಹಾಕಿಸಿಕೊಳ್ಳಲು ಉತ್ಸಾಹದಿಂದಲೇ ಮುಂದಾಗಿದ್ದಾರೆ. ಇದುವರೆಗೆ ದೇಶದಲ್ಲಿ ಲಸಿಕೆ ಪಡೆದುಕೊಂಡವರ ಸಂಖ್ಯೆ 68,39,42,829 ಕ್ಕೆ ಏರಿಕೆಯಾಗಿದೆ.
ಒಂದೆಡೆ ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಕೊರೋನಾ ಮಟ್ಟಹಾಕಲು ಲಸಿಕಾ ಅಭಿಯಾನವೂ ಸಮರೋಪಾದಿಯಲ್ಲಿ ಸಾಗಿದೆ. ಕರ್ನಾಟಕದಲ್ಲಿ ಈವರೆಗೂ 4,47,97,767 ಮಂದಿ ಲಸಿಕೆ ಪಡೆದಿದ್ದು, 3,36,38,730 ಮಂದಿ ಮೊದಲ ಡೋಸ್ ಪಡೆದಿದ್ದಾರೆ. 1,11,59,037 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.