Wednesday, August 10, 2022

Latest Posts

ಒಂದೇ ಗತಿಯಲ್ಲಿ ಸಾಗುತ್ತಿದೆ ಲಸಿಕೀಕರಣ: ನಿನ್ನೆ ರಾಜ್ಯದಲ್ಲಿ ಎಷ್ಟು ಜನ ವ್ಯಾಕ್ಸಿನ್ ಪಡೆದಿದ್ದಾರೆ?

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೋವಿಡ್ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ದೇಶದಲ್ಲಿ ಲಸಿಕೀಕರಣ ಮುಂದುವರಿದಿದ್ದು,
ಜನ ಲಸಿಕೆ ಹಾಕಿಸಿಕೊಳ್ಳಲು ಉತ್ಸಾಹದಿಂದಲೇ ಮುಂದಾಗಿದ್ದು, ಇದುವರೆಗೆ ದೇಶದಲ್ಲಿ ಲಸಿಕೆ ಪಡೆದುಕೊಂಡವರ ಸಂಖ್ಯೆ 84,15,18,026ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 72,20,642 ಜನ ವ್ಯಾಕ್ಸಿನ್ ಪಡೆದಿದ್ದಾರೆ.

ಒಂದೆಡೆ ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಕೊರೋನಾ ಮಟ್ಟಹಾಕಲು ಲಸಿಕಾ ಅಭಿಯಾನವೂ ಸಮರೋಪಾದಿಯಲ್ಲಿ ಸಾಗಿದೆ. ಕರ್ನಾಟಕದಲ್ಲಿ ಈವರೆಗೂ 5,39,53,425 ಮಂದಿ ಲಸಿಕೆ ಪಡೆದಿದ್ದು, 3,82,73,672 ಮಂದಿ ಮೊದಲ ಡೋಸ್ ಪಡೆದಿದ್ದಾರೆ. 1,56,79,753 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss