Wednesday, July 6, 2022

Latest Posts

VACCINE UPDATE: ಹೆಚ್ಚಾಗುತ್ತಲೇ ಇದೆ ಲಸಿಕೆ ಪಡೆದವರ ಸಂಖ್ಯೆ: ನಿನ್ನೆ ಎಷ್ಟು ಮಂದಿವ್ಯಾಕ್ಸಿನ್ ಪಡೆದಿದ್ದಾರೆ ಗೊತ್ತಾ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೋವಿಡ್ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ದೇಶದಲ್ಲಿ ಲಸಿಕೀಕರಣ ಮುಂದುವರಿದಿದ್ದು,
ಜನ ಲಸಿಕೆ ಹಾಕಿಸಿಕೊಳ್ಳಲು ಉತ್ಸಾಹದಿಂದಲೇ ಮುಂದಾಗಿದ್ದು, ಇದುವರೆಗೆ ದೇಶದಲ್ಲಿ ಲಸಿಕೆ ಪಡೆದುಕೊಂಡವರ ಸಂಖ್ಯೆ 43,51,96,001 ಕ್ಕೆ ಏರಿಕೆಯಾಗಿದೆ.
ಒಂದೆಡೆ ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಕೊರೋನಾ ಮಟ್ಟಹಾಕಲು ಲಸಿಕಾ ಅಭಿಯಾನವೂ ಸಮರೋಪಾದಿಯಲ್ಲಿ ಸಾಗಿದೆ. ಕರ್ನಾಟಕದಲ್ಲಿ ಈವರೆಗೂ 2,73,25,555 ಮಂದಿ ಲಸಿಕೆ ಪಡೆದಿದ್ದು, 33,84,32,579 ಮಂದಿ ಮೊದಲ ಡೋಸ್ ಪಡೆದಿದ್ದಾರೆ. 9,18,76,028 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss