ವಡೋದರಾ ಸೇತುವೆ ದುರಂತ: ಸಾವಿನ ಸಂಖ್ಯೆ 17ಕ್ಕೆ ಏರಿಕೆ, ನಾಲ್ವರು ಎಂಜಿನಿಯರ್‌ಗಳ ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ನಡೆದ ಸೇತುವೆ ದುರಂತದಲ್ಲಿ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಇನ್ನೂ ನಾಲ್ವರು ನಾಪತ್ತೆಯಾಗಿದ್ದಾರೆ.

ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಪಡೆಗಳು 4 ಕಿ.ಮೀ. ಕೆಳಭಾಗದವರೆಗೆ ಶೋಧಕಾರ್ಯ, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಘಟನಾ ಸ್ಥಳದಲ್ಲಿ ಎರಡು ವಾಹನಗಳು ಕೆಸರಿನಲ್ಲಿ ಸಿಲುಕಿಕೊಂಡಿವೆ. ಮಳೆಯಾಗುತ್ತಿರುವ ಕಾರಣ ನದಿಯ ನೀರಿನ ಮಟ್ಟ ಹೆಚ್ಚಾಗಿದೆ ಎಂದು ಡಿಸಿ ಹೇಳಿದ್ದಾರೆ.

ಘಟನೆ ಬಳಿಕ ಆರ್&ಬಿ ಇಲಾಖೆಯ ನಾಲ್ವರು ಎಂಜಿನಿಯರ್‌ಗಳನ್ನು ಅಮಾನತು ಮಾಡಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಆದೇಶ ಹೊರಡಿಸಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!