ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಶ್ರೀರಂಗಪಟ್ಟಣ ದಸರಾಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಮಂಗಳಾರತಿ ಬಳಿಕ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ವಿದ್ಯುಕ್ತ ಚಾಲನೆ ನೀಡಲಾಯಿತು.
ಶ್ರೀರಂಗಪಟ್ಟಣದ ಕಿರಂಗೂರು ಬಳಿ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ಬಳಿಕ ನಟ, ನಿರ್ದೇಶಕ ಟಿ.ಎಸ್.ನಾಗಾಭರಣ್ ಚಾಲನೆ ಕೊಟ್ಟರು.
ದಸರಾ ಆನೆ ಮಹೇಂದ್ರನ ಮೇಲೆ ಮರದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡದೇವಿಗೆ ಪುಷ್ಪಾರ್ಚನೆ ಮಾಡಲಾಯಿತು. ಮರದ ಅಂಬಾರಿ ಹೊತ್ತ ಮಹೇಂದ್ರ ಆನೆ ಜೊತೆಗೆ ಕುಮ್ಕಿ ಆನೆಗಳಾದ ಕಾವೇರಿ, ಲಕ್ಷ್ಮೀ ಹೆಜ್ಜೆ ಹಾಕಿದವು.
ಸಚಿವ ಚಲುವರಾಯಸ್ವಾಮಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ ಸೇರಿ ಹಲವರು ಭಾಗಿಯಾಗಿದ್ದರು. ಶ್ರೀರಂಗನಾಥಸ್ವಾಮಿ ದೇವಾಲಯ ಬಳಿಯ ವೇದಿಕೆಯಲ್ಲಿ ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.