ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ, ದೇಗುಲಗಳಲ್ಲಿ ವಿಶೇಷ ಪೂಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ್ಯಂತ ಸಂಭ್ರಮದ ವೈಕುಂಠ ಏಕಾದಶಿ ಆಚರಣೆ ಆರಂಭವಾಗಿದ್ದು, ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಅದರಲ್ಲಿಯೂ ಬೆಂಗಳೂರಿಗರು ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಿಸುತ್ತಾರೆ. ಈ ಬಾರಿಯೂ ಅದ್ಧೂರಿ ವೈಕುಂಠ ಏಕಾದಶಿ ಆಚರಿಸಲಾಗುತ್ತಿದ್ದು, ದೇಗುಲಗಳಲ್ಲಿ ಹಬ್ಬದ ವಾತಾವರಣ ಮನೆಮಾಡಿದೆ.

ಮಧ್ಯರಾತ್ರಿಯಿಂದಲೇ ದೇಗುಲಗಳಲ್ಲಿ ವೈಕುಂಠನಿಗೆ ವಿಶೇಷ ಪೂಜೆ ಮಾಡಲಾಗುತ್ತಿದೆ. ಪಂಚಾಭಿಷೇಕ, ಪುಷ್ಪಾಭಿಷೇಕ ಹಾಗೂ ವಿಶೇಷ ಅಲಂಕಾರ ಮಾಡಲಾಗಿದೆ.

ಮಲ್ಲೇಶ್ವರಂನ ಟಿಟಿಡಿ ದೇಗುಲದಲ್ಲಿ ಪೂಜೆ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವರ ದರುಶನಕ್ಕೆ ಆಗಮಿಸಿದ್ದಾರೆ. ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತದೆ.

ಇಂದು ಸಂಜೆಯೊಳಗೆ ಲಕ್ಷಾಂತರ ಮಂದಿ ಭಾಗಿಯಾಗುವ ಸಾಧ್ಯತೆಯಿದ್ದು ಕಡ್ಡಾಯವಾಗಿ ಮಾಸ್ಕ್ ಧರಿಸಿ ಎಂದು ದೇಗುಲ ಆಡಳಿತ ಮಂಡಳಿ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!