March 6, 2026
Friday, March 6, 2026
spot_img

ಇನ್ನು ಕಮ್ಮಿ ಖರ್ಚಿನಲ್ಲಿ ವೈಷ್ಣೋದೇವಿ ದರುಶನ; ರಾಜ್ಯ ಬಜೆಟ್‌ನಲ್ಲಿ ಭರ್ಜರಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಧ್ಯಾತ್ಮಿಕ ಪ್ರವಾಸ ಕೈಗೊಳ್ಳುವ ರಾಜ್ಯದ ಜನತೆಗೆ ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಜಮ್ಮು ಮತ್ತು ಕಾಶ್ಮೀರದ ಪವಿತ್ರ ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಸರ್ಕಾರ ಮುಂದಾಗಿದೆ.

ಈ ಯೋಜನೆಯಡಿ ರಾಜ್ಯದಿಂದ ವೈಷ್ಣೋದೇವಿ ಯಾತ್ರೆ ಕೈಗೊಳ್ಳುವ ಪ್ರತಿ ಯಾತ್ರಾರ್ಥಿಗೆ 5,000 ರೂಪಾಯಿಗಳ ಸಹಾಯಧನವನ್ನು ನೀಡಲಾಗುವುದು ಎಂದು ಘೋಷಿಸಲಾಗಿದೆ. ದೂರದ ಯಾತ್ರೆಗೆ ತಗಲುವ ಪ್ರಯಾಣ ವೆಚ್ಚದ ಹೊರೆಯನ್ನು ತಗ್ಗಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಭಕ್ತ ವಲಯದಲ್ಲಿ ಹರ್ಷ ವ್ಯಕ್ತವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !