ವಿದ್ಯಾರ್ಥಿಗಳೇ ಗಮನಿಸಿ: ಹಳೆ ಬಸ್ ಪಾಸ್ ಅವಧಿ ಜೂ. 15ರ ವರೆಗೆ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ದ ಬಸ್‌ಗಳಲ್ಲಿ ಜೂನ್‌ 15ರ ವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಅಥವಾ ರಿಯಾಯಿತಿ ದರ ಪಾವತಿಸಿ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ಸುತ್ತೋಲೆ ಹೊರಡಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2023-24ನೇ ಸಾಲಿನ ವಿದ್ಯಾರ್ಥಿ ಉಚಿತ / ರಿಯಾಯಿತಿ ಬಸ್ ಪಾಸುಗಳನ್ನು ಇಡಿಸಿಎಸ್ ಇಲಾಖೆಯ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮ ತೆಗೆದುಕೊಂಡಿದೆ. ಇದಕ್ಕಾಗಿ ಇಡಿಸಿಎಸ್‌ ಇಲಾಖೆ ಸಿದ್ಧತೆ ನಡೆಸಿದೆ.

ಆನ್‌ಲೈನ್‌ ಮೂಲಕ ವಿದ್ಯಾರ್ಥಿ ಪಾಸ್‌ಗೆ ಅರ್ಜಿ ಸಲ್ಲಿಸುವುದಕ್ಕೆ ಮತ್ತು ಪಾಸ್‌ ಪಡೆಯಲು ಸಮಯ ಬೇಕಿದೆ. ಈಗಾಗಲೇ ಶೈಕ್ಷಣಿಕ ತರಗತಿ ಶುರುವಾಗಿರುವ ಕಾರಣ, ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳುವ ಸಲುವಾಗಿ ಉಚಿತ/ ರಿಯಾಯಿತಿ ಬಸ್‌ ಪಾಸ್‌ ಮೂಲಕ ಬಸ್‌ ಪ್ರಯಾಣಕ್ಕೆ ಅವಕಾಶ ವಿಸ್ತರಿಸಲಾಗಿದೆ ಎಂದು ನಿಗಮದ ಸುತ್ತೋಲೆಯಲ್ಲಿ ತಿಳಿಸಿದೆ.

ನಿಗಮದ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಜೂನ್‌ 15ರ ವರೆಗೆ ನಗರ ಮತ್ತು ಹೊರವಲಯಗಳಲ್ಲಿ ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಅಷ್ಟರೊಳಗೆ ವಿದ್ಯಾರ್ಥಿಗಳು ಬಸ್‌ ಪಾಸ್‌ ಪಡೆಯಬೇಕು.

ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬೇಕಾದರೆ ಪ್ರಸಕ್ತ ವರ್ಷದಲ್ಲಿ ಶಾಲಾ / ಕಾಲೇಜುಗಳಿಗೆ ದಾಖಲಾಗಿರುವುದಕ್ಕೆ ಸಂಬಂಧಿಸಿದ ದಾಖಲೆ ಅಥವಾ 2022-23ನೇ ಸಾಲಿನ ವಿದ್ಯಾರ್ಥಿ ಬಸ್‌ ಪಾಸ್ ಅನ್ನು ನಿರ್ವಾಹಕರಿಗೆ ತೋರಿಸಬೇಕಿರುವುದು ಅಗತ್ಯ ಎಂದು ನಿಗಮದ ಸುತ್ತೋಲೆ ವಿವರಿಸಿದೆ.

https://twitter.com/KSRTC_Journeys/status/1663802847132110848?s=20

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!