ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಚಿವ ಬಿ ನಾಗೇಂದ್ರಗೆ SIT ನೊಟೀಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಮಾಜಿ ಸಚಿವ ಬಿ ನಾಗೇಂದ್ರಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರಗೆ ಸಂಕಷ್ಟ ಎದುರಾಗಿದ್ದು, ವಿಶೇಷ ತನಿಖಾ ತಂಡದಿಂದ (SIT) ನೊಟೀಸ್ ಜಾರಿಗೊಳಿಸಲಾಗಿದೆ.

ಅಲ್ಲದೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲಗು SIT ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮವಾಗಿ ಹಣ ವರ್ಗಾವಣೆ ಆಗಿದೆ ಎಂದು ನಿಗಮದ ಅಧ್ಯಕ್ಷರ ಚಂದ್ರಶೇಖರ ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತರ ಸರ್ಕಾರ ಪ್ರಕರಣವನ್ನು ಸಿಐಡಿ ಗೆ ಬಯಸಿತ್ತು ಇದಾದ ಬಳಿಕ ಹಲವುಬೆಳವಣಿಗೆಯ ನಂತರ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!