ಹೊಸದಿಗಂತ ಹುಬ್ಬಳ್ಳಿ:
ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳ ಜವಬ್ದಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊತ್ತು ತಕ್ಷಣ ರಾಜೀನಾಮೆ ನೀಡಿ, ಸ್ವತಃ ನಿಕ್ಷಪಕ್ಷಪಾತವಾಗಿ ತನಿಖೆಗೆ ಒಳಪಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣ ಸರ್ಕಾರಿ ಖಜಾನೆಯ ಹಗಲ ದರೋಡೆಯಾಗಿದೆ. ನಿಗಮದ ಖಾತೆಯಲ್ಲಿರುವ ಹಣ ಬೇನಾಮಿ ಖಾತೆಗೆ ವರ್ಗಾವಣೆ ಮಾಡಲಾಗಿದೆ. ದಲಿತರ ಹಣವನ್ನು ಕಾಂಗ್ರೆಸ್ ನಾಯಕರು ಅಕಾರದ ದುರುಪಯೋಗದಿಂದ ಕೊಳ್ಳೆ ಹೊಡೆದಿದ್ದಾರೆ ಎಂದು ಆರೋಪಿಸಿದರು.
ಮಾಜಿ ಸಚಿವ ನಾಗೇಂದ್ರ ರಾಜೀನಾಮೆ ನೀಡಿದರೆ ಸಾಲದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕತೆ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ವಾಲ್ಮೀಕಿ ನಿಗಮದ ಹಣ ದಲಿತರ ಶಿಕ್ಷಣ, ಉದ್ಯೋಗ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಮೀಸಲಿಡಬೇಕು. ಆದರೆ ಸಿದ್ದರಾಮಯ್ಯ ಅವರು ಮತ ಬ್ಯಾಂಕ್‌ಗಾಗಿ ಬಳಸಿಕೊಂಡಿರುವುದು ದುರ್ದೈವ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.