ವಾಲ್ಮೀಕಿ ನಿಗಮದ ಹಗರಣ | ಸರ್ಕಾರದ ಗೌರವ ಕಾಪಾಡಲು ಎಲ್ಲ ರೀತಿಯ ಕ್ರಮ: ಡಿ.ಕೆ.ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸೂಕ್ತ ದಾಖಲೆ ಮತ್ತು ಪಾಲ್ಗೊಂಡಿರುವ ಬಗ್ಗೆ ಸುಳಿವು ಸಿಕ್ಕರೆ ಸರ್ಕಾರದ ಗೌರವ ಕಾಪಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವೇಳೆ ಕೆ.ಎಸ್. ಈಶ್ವರಪ್ಪ ಅವರ ಹೆಸರನ್ನು ನೇರವಾಗಿ ಪ್ರಸ್ತಾಪಿಸಲಾಗಿತ್ತು. ಆದರೆ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯ ಡೆತ್‌ ನೋಟ್‌ನಲ್ಲಿ ಸಚಿವರು ಮೌಖಿಕವಾಗಿ ಸೂಚಿಸಿದರು ಎಂದಿದ್ದಾರೆ. ಆದರೂ ನಮಗೆ ದಾಖಲೆ ಅಥವಾ ಹಗರಣದಲ್ಲಿ ಪಾಲ್ಗೊಂಡಿರುವ ಸುಳಿವು ಸಿಕ್ಕರೆ ನಮ್ಮ ಗೌರವ ಕಾಪಾಡಿಕೊಳ್ಳಲು ತನಿಖೆ ಮುಗಿಯುವವರೆಗೆ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಮಾಡುತ್ತೇವೆ. ನಿಗಮದ ಹಣ ಎಲ್ಲೆಲ್ಲಿ ಹೋಗಿದೆ ಎಂದು ಅಧಿಕಾರಿ ಗಳು ಬೆನ್ನತ್ತಿದ್ದಾರೆ ಎಂದರು.

ತನಿಖೆಯನ್ನು ಸಿಬಿಐಗೆ ಒಪ್ಪಿಸುವ ಕುರಿತಂತೆ ಪ್ರತಿಕ್ರಿಯಿಸಿ, 50 ಕೋಟಿ ರು.ಗೂ ಹೆಚ್ಚಿನ ಬ್ಯಾಂಕ್ ಅವ್ಯವಹಾರದ ತನಿಖೆ ನೇರವಾಗಿ ಸಿಬಿಐಗೆ ಹೋಗುತ್ತದೆ. ಅದು ನಿಯಮದಲ್ಲೂ ಇದೆ. ಇಲ್ಲಿ ಬಿಜೆಪಿ ಕಾಲದ ಅಕ್ರಮಗಳೂ ತನಿಖೆ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವುದಿಲ್ಲ, ಬಿಜೆಪಿ ಕಾಲದಲ್ಲೂ ಈ ರೀತಿಯ ಘಟನೆಗಳು ನಡೆದಿವೆ. ಅದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲನಾಯಕರಿಗೂ ತಿಳಿದಿದೆ. ಆ ಬಗ್ಗೆಯೂ ಸಮಗ, ತನಿಖೆ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!