ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಸಿಎಂ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯದಾದ್ಯಂತ ಶುಕ್ರವಾರ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಪ್ರತಿಭಟನೆಯ ಭಾಗವಾಗಿ ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈನ್ನು ಕೋಲಾರದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!