ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿಚಾರಣೆ ಬಳಿಕ ಮಾಜಿ ಸಚಿವ ಬಿ.ನಾಗೇಂದ್ರರನ್ನು ಇಡಿ ಬಂಧನ ಮಾಡಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಕೋರ್ಟ್‌ಗೆ ಹಾಜರುಪಡಿಸಲು ಇಡಿ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.
ನಿರಂತರ 40 ಗಂಟೆಗಳ ತಪಾಸಣೆ ಹಾಗೂ ತನಿಖೆಯ ಬಳಿಕ, ವಾಲ್ಮೀಕಿ ನಿಗಮ ಹಗರಣ ಕುರಿತು ಹೆಚ್ಚಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಶುಕ್ರವಾರ ಬೆಳಗ್ಗೆ ವಶಕ್ಕೆ ಪಡೆಡಿದ್ದರು.
ಇದೀಗ ಸುದೀರ್ಘ ೭ ಗಂಟೆಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಲಾಗಿದೆ.
ಬೆಂಗಳೂರಿನ ಇಡಿ ಕಚೇರಿಯಲ್ಲಿ ಅಧಿಕಾರಿಗಳು ಅವರನ್ನು ಪ್ರಶ್ನಿಸಲಾಗಿತ್ತು. ನಾಗೇಂದ್ರ ಸಿಎ ಹರೀಶ್ ಕೂಡ ನಿನ್ನೆಯಿಂದ ಇಡಿ ವಶದಲ್ಲಿದ್ದಾರೆ. ಯೂನಿಯನ್ ಬ್ಯಾಂಕ್‌ನಲ್ಲಿ ಸುಳ್ಳು ದಾಖಲೆ ನೀಡಿ ಅಕ್ರಮ ಖಾತೆ ತೆರೆದು ಕೋಟ್ಯಂತರ ರೂಪಾಯಿ ನಿಗಮದ ಹಣವನ್ನು ಅಲ್ಲಿಗೆ ವರ್ಗಾಯಿಸಿದ ಕುರಿತು ಹರೀಶ್ ಹೇಳಿಕೆಯಲ್ಲಿ ಕೆಲವು ಸಾಕ್ಷಿಗಳು ದೊರೆತಿವೆ. ಬ್ಯಾಂಕ್ ಸಿಸಿಟಿವಿ ರೆಕಾರ್ಡ್‌ಗಳನ್ನು ಚೆಕ್ ಮಾಡಿದಾಗಲೂ, ನಾಗೇಂದ್ರ ಸಿಎ ಹಾಗೂ ಶಾಸಕ ದದ್ದಲ್ ಸಿಎ ಅಲ್ಲಿಗೆ ಬಂದು ಹೋದ ಕುರಿತು ದಾಖಲೆ ಲಭ್ಯವಾಗಿದೆ. 50 ಲಕ್ಷ ಡೀಲ್ ನಡೆಸಲಾಗಿರುವ ಕುರಿತು ಬಂಧಿತರಾಗಿರುವ ಬ್ಯಾಂಕ್ ಅಧಿಕಾರಿಗಳು ಬಾಯಿ ಬಿಟ್ಟಿದ್ದಾರೆ. ಹೀಗಾಗಿ ಈಗ ಹೆಚ್ಚಿನ ತನಿಖೆಯ ಉರುಳು ನಾಗೇಂದ್ರ ಕೊರಳಿಗೆ ಸುತ್ತಿಕೊಂಡಿದೆ.