ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್ ಎಸ್ಐಟಿಗೆ ಸೂಚನೆ ನೀಡಿದೆ.
ಇಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಕೋರಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ವಿಚಾರಣೆ ನಡೆಸಿತು.
ಸಿಬಿಐನಿಂದ ಸಮಗ್ರ ತನಿಖೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಅವರು ರಿಟ್ ಅರ್ಜಿ ಸಲ್ಲಿಸಿದ್ದರು.