ಅಧಿಕಾರಿಗಳ ಹೆಸರು ಬರೆದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ, ಡೆತ್‌ನೋಟ್‌ನಲ್ಲಿ ಸ್ಫೋಟಕ ಮಾಹಿತಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಡೆತ್‌ನೋಟ್‌ನಲ್ಲಿ ಮೂವರು ಅಧಿಕಾರಿಗಳ ಹೆಸರು ಬರೆದಿಟ್ಟು, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ವಿನೋಬನಗರದಲ್ಲಿ ನಡೆದಿದೆ.

ಇಲ್ಲಿನ ವಿನೋಬನಗರದ ಕೆಂಚಪ್ಪ ಬಡಾವಣೆಯ ನಿವಾಸಿ ಚಂದ್ರಶೇಖರನ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯಾಗಿದ್ದ ಚಂದ್ರಶೇಖರನ್ ಬೆಂಗಳೂರಿನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವಮಾನ ಸಹಿಸದೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೇ ಡೆತ್‌ನೋಟ್‌ನಲ್ಲಿ ಮೂವರು ಅಧಿಕಾರಿಗಳ ಹೆಸರನ್ನೂ ಉಲ್ಲೇಖಿಸಿ, ಬಹುಕೋಟಿ ಭ್ರಷ್ಟಾಚಾರ ರಹಸ್ಯವನ್ನೂ ಬಿಚ್ಚಿಟ್ಟಿದ್ದಾರೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಲ್ಮೀಕಿ ನಿಗಮದ ಅನುದಾನದಲ್ಲಿ 80 ರಿಂದ 85 ಕೋಟಿ ರೂ.ಗಳನ್ನು ನಿಯಮ ಬಾಹಿರವಾಗಿ ಲೂಟಿ ಮಾಡಿದ್ದಾರೆ. ಈ ಅವ್ಯವಹಾರದಲ್ಲಿ ನನ್ನ ಪಾತ್ರವಿಲ್ಲ. ಆದರೆ ಕೆಲಸದ ಒತ್ತಡದಲ್ಲಿ ಸದರಿ ಖಾತೆಯ ಚೆಕ್ ಪುಸ್ತಕ ಪಡೆಯದಿರುವುದು ಮತ್ತು ಕ್ಯಾಶ್ ಪುಸ್ತಕ ಮುಕ್ತಾಯಗೊಳಿಸದಿರುವುದು ನನ್ನ ತಪ್ಪಾಗಿದೆ. ಈ ಹಗರಣದಲ್ಲಿ ನಾನು ಕಾರಣನಲ್ಲ. ಆದ್ದರಿಂದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!