ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮತ್ತೊಬ್ಬ ಆರೋಪಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧ ಅಧೀಕ್ಷಕ ಚಂದ್ರಕ್ಷೇರ ಆತ್ಮಹತ್ಯೆ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಸಾಯಿತೇಜ ಎಂಬುವರ ಹೆಸರು ಚಂದ್ರಶೇಖರ್​ ಡೆತ್​​ನೋಟ್​​​ನಲ್ಲಿ ಇತ್ತು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಸಾಯಿತೇಜನನ್ನು ಬಂಧಿಸಿ ತೆಗೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದಾರೆ.

ಇವರ ಬಳಿ ಹಣಕಾಸು ವರ್ಗಾವಣೆ ಸಂಬಂಧದ ಕೆಲವು ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂಬುವುದು ತಿಳಿಬಂದಿದೆ. ಆತ್ಮಹತ್ಯೆಗೆ ಶರಣಾದ ನಿಗಮದ ಅಧಿಕಾರಿ ಚಂದ್ರಶೇಖರನ್ ಬರೆದಿದ್ದ ಮರಣಪತ್ರದಲ್ಲಿ ಸಾಯಿತೇಜ ಹೆಸರು ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಸಾಯಿತೇಜ ಅವರನ್ನು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!