ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಇಡಿ ವಿರುದ್ದದ ಎಫ್​ಐಆರ್​ಗೆ ಹೈಕೋರ್ಟ್​ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ತನಿಖೆ ವೇಳೆ ಅಧಿಕಾರಿಗೆ ಇಡಿ ಒತ್ತಡ ಹೇರಿದ ಆರೋಪದ ಮೇಲೆ ದಾಖಲಾಗಿದ್ದ ಎಫ್​ಐಆರ್​ಗೆ ಹೈಕೋರ್ಟ್​ ತಡೆ ನೀಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ತನಿಖೆಯ ವೇಳೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹೇರಿರುವ ಆರೋಪದ ಮೇಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ತಮ್ಮ ವಿರುದ್ಧ ಎಫ್​​​ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ (ಇಡಿ) ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು.

ಇದೀಗ ಹೈಕೋರ್ಟ್​, ಇಡಿ ಅಧಿಕಾರಿಗಳ ವಿರುದ್ಧದ ಎಫ್​ಐಆರ್​ಗೆ ತಡೆ ನೀಡಿ ಆದೇಶ ಹೊರಡಿಸಿದೆ.

ಮಾಜಿ ಸಚಿವ ಬಿ.ನಾಗೇಂದ್ರ ಒತ್ತಡದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಾಗಿ ಒಪ್ಪಿಕೊಳ್ಳುವಂತೆ ತಮ್ಮ ಮೇಲೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಹಾಗೂ, ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್.ಬಿ ದೂರು ನೀಡಿದ್ದರು.

ಬೆಂಗಳೂರು ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯ ಪೊಲೀಸರು, ಇಡಿ ಅಧಿಕಾರಿಗಳಾದ ಕಣ್ಣನ್ ಹಾಗೂ ಮಿತ್ತಲ್ ವಿರುದ್ಧ ಎಫ್​ಐಆರ್ ದಾಖಲಿಸಿದ್ದರು. ಈ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಈ ಅಧಿಕಾರಿಗಳು ಮಂಗಳವಾರ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಇಂದು (ಜುಲೈ 23) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಇಡಿ ಅಧಿಕಾರಿಗಳ ವಿರುದ್ಧದ ಎಫ್​ಐಆರ್​ಗೆ ತಡೆ ನೀಡಿ ಆದೇಶಿಸಿದೆ.

ಇಡಿ ವಿರುದ್ಧ ಕಾಂಗ್ರೆಸ್​​ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​, ಮಾಜಿ ಸಚಿವ ನಾಗೇಂದ್ರ ಹೆಸರೇಳುವಂತೆ ಇಡಿ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದುಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಇಡಿ, ಸಿಬಿಐ, ಐಟಿ ದುರ್ಬಳಕೆ ಮಾಡಿಕೊಂಡಿದೆ ಎಂದು ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. Hagarana mado dallade adannu muchhi HAKALU EGA adhikaradalli iruva sarakara enella adda dari hidiyabahuda emba yochanege enforcement directorate mele needida police complaint and fir yavude karanakku hagaranada roovarigalige shiksheyagali nigamada 94 koti Hana vapassu padeyabeku EMBUDE namma ashaya

LEAVE A REPLY

Please enter your comment!
Please enter your name here

error: Content is protected !!