ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ಪ್ರಕರಣದಲ್ಲಿ ಸಿಲುಕಿರುವ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಇಂದು ವಿಧಾನಸಭಾ ಕಲಾಪಕ್ಕೆ ಹಾಜರಾಗಿದ್ದಾರೆ.
ವಿಧಾನಸಭೆಯಲ್ಲಿ ದದ್ದಲ್ ಕಾಣಿಸಿದ ಬೆನ್ನಲ್ಲೇ ಮಾಧ್ಯಗಳು ಕೇಳಿದ ಪ್ರಶ್ನೆಗೆ, ನನಗೆ ಎಸ್‌ಐಟಿ ನೋಟಿಸ್ ನೀಡಿಲ್ಲ, ಇಡಿಯಿಂದಲೂ ನೋಟಿಸ್ ಬಂದಿಲ್ಲ. ನಾನು ಅಧಿವೇಶನಕ್ಕೆ ಹೋಗುತ್ತಿದ್ದೇನೆ. ಹೆಚ್ಚೇನೂ ಹೇಳುವುದಿಲ್ಲ ಎಂದು ಹೇಳಿ ತೆರಳಿದರು. ವಿಧಾನಸೌಧಕ್ಕೆ ಆಗಮಿಸಿದ ದದ್ದಲ್ ಈಗ ಸಿಎಂ ಸಿದ್ದರಾಮಯ್ಯ ಅವರನ್ನು ಆಡಳಿತ ಪಕ್ಷದ ಕೊಠಡಿಯಲ್ಲಿ ಭೇಟಿ ಮಾಡಿ ಚರ್ಚಿಸುತ್ತಿದ್ದಾರೆ.