ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಕ್ಯಾಮ್‌: ನಾಗೇಂದ್ರ ಪಿಎ ಹರೀಶ್​ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಪಿಎ ಹರೀಶ್‌ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್​​ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದರು. ಇದರ ಬೆನ್ನಲ್ಲೇ ನಾಗೇಂದ್ರ ಅವರ ಪಿಎ ಹರೀಶ್ ಅವರನ್ನು ಬಂಧಿಸಲಾಗಿದೆ.

ಬಂಧಿತ ಹರೀಶ್​ ಅವ್ಯವಹಾರದ ವೇಳೆ ಅಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಿದ್ದು, ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೈದರಾಬಾದ್‌ನ ಆರೋಪಿ ಸತ್ಯನಾರಾಯಣ ವರ್ಮಾರಿಂದ ಬಂದಿದ್ದ ಹಣ ಹರೀಶ್‌ಗೆ ತಲುಪಿತ್ತು. ಪಿಎ ಹರೀಶ್‌ ಏಪ್ರಿಲ್ ತಿಂಗಳಿನ ಎರಡನೇ ವಾರ ಬಿಬಿಎಂಪಿ ಕಚೇರಿಯ ಶ್ರೀನಿಧಿ ಸಾಗರ್ ಹೋಟೆಲ್ ಬಳಿ ಪದ್ಮನಾಭರಿಂದ 25 ಲಕ್ಷ ಹಣ ಪಡೆದ ಆರೋಪ ಎದುರಿಸುತ್ತಿದ್ದಾರೆ. ಸದ್ಯ ಇಡಿ ಹರೀಶ್‌ರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!