ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ ಕೇಸ್: ಇಬ್ಬರು ಅಧಿಕಾರಿಗಳು ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಸಂಬಂಧಸರ್ಕಾರದ ಹಾಲಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಕೌಂಟ್ ಆಫೀಸರ್ ಅಮಾನತುಗೊಳಿಸಿ ಆದೇಶಿಸಿದೆ.

ಈ ಸಂಬಂಧ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ.

ಜೆ.ಜಿ ಪದ್ಮನಾಭ, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬೆಂಗಳೂರು ಇವರ ವಿರುದ್ಧದ ಆರೋಪಗಳ ಹಿನ್ನಲೆಯಲ್ಲಿ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(1)(ಡಿ) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಅಕೌಂಟ್ ಆಫೀಸರ್ ಆಗಿದ್ದ ಪರಶುರಾಮ್ ಜಿ ದುರ್ಗಣ್ಣ ಎಂಬುವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!