ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ಸಮಾಜದವರು ಕುರುಬ ಸಮಾಜದವರ ಮೇಲೆ ದಂಗೆ ಏಳಬೇಕು ಎಂಬ ಹೇಳಿಕೆ ವಿಚಾರ ಬಿಜೆಪಿ ನಾಯಕ ಚಲವಾದಿ ನಾರಾಯಣಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಕುರುಬ ಸಮುದಾಯವನ್ನು ಎಸ್‌ಟಿ ವರ್ಗಕ್ಕೆ ಸೇರಿಸಬೇಕು ಎಂಬ ಬೇಡಿಕೆಯ ಸಂದರ್ಭದಲ್ಲಿ ಚಲುವಾದ ನಾರಾಯಣಸ್ವಾಮಿ, ವಾಲ್ಮೀಕಿ ಸಮಾಜದವರು ಕುರುಬರ ಮೇಲೆ ದಂಗೆ ಏಳಬೇಕು’ ಎಂಬ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಚಲವಾದಿ ನಾರಾಯಣಸ್ವಾಮಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರ ನೇತೃತ್ವದ ನ್ಯಾಯಾಲಯವು ವಿಚಾರಣೆ ನಡೆಸಿತು. ನ್ಯಾಯಾಲಯವು ಚಲವಾದಿ ನಾರಾಯಣಸ್ವಾಮಿಗೆ ಮಧ್ಯಂತರ ಜಾಮೀನು ನೀಡಿ, ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿತು. ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಲಾಗಿದೆ.