ವಾಲ್ಮೀಕಿ ಬಹುಕೋಟಿ ಹಗರಣ: ಇಡಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ(ಜಾರಿ ನಿರ್ದೇಶನಾಲಾಯ) ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ.

ಪ್ರಕರಣ ಸಂಬಂಧ ಸಾಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಇಬ್ಬರು ಇಡಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.

ತಮ್ಮ ವಿರುದ್ಧದ ಕೇಸ್ ರದ್ದುಗೊಳಿಸುವಂತೆ ಇಡಿ ಅಧಿಕಾರಿಗಳು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ದೂರು ದಾಖಲಿಸಿದ್ದ ಅಧಿಕಾರಿ ಕೇಸ್ ಹಿಂಪಡೆದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್ ರದ್ದುಗೊಳಿಸುವಂತೆ ಆದೇಶ ನೀಡಿ ಪ್ರಕರಣ ಇತ್ಯರ್ಥ ಗೊಳಿಸಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!