ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್‌ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ.
ಬಹುತೇಕ 12 ಗಂಟೆ ವೇಳೆಗೆ ಜಾಮೀನು ತೀರ್ಪು ಬರುವ ಸಾಧ್ಯತೆಯಿದೆ. ಹಾಗಾಗಿ ಇವತ್ತು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.
ಈಗಾಗಲೇ ನಾಗೇಂದ್ರ ವಿರುದ್ಧ ಇಡಿ ಅಧಿಕಾರಿಗಳು ಪ್ರಾಸಿಕ್ಯೂಷನ್‌ಗೆ ಅನುಮತಿ ಪಡೆದಿದ್ದಾರೆ. ಸದ್ಯ ಮಾಜಿ ಸಚಿವರಿಗೆ ಬೇಲ್ ಸಿಕ್ಕಿದರಷ್ಟೇ ಪರಪ್ಪನ ಅಗ್ರಹಾರದಿಂದ ರಿಲೀಸ್ ಆಗಲಿದ್ದಾರೆ.