ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ)ಮಂಗಳವಾರ ಶಾಸಕರು/ಸಂಸದರ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.
ಜೈಲು ಪಾಲಾಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಹಗರಣದ ಮಾಸ್ಟರ್ ಮೈಂಡ್ ಎಂದು ಇಡಿ ತನ್ನ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ.
ಆದರೆ ಕರ್ನಾಟಕ ಪೊಲೀಸ್‌ನ ಅಪರಾಧ ತನಿಖಾ ಇಲಾಖೆ(ಸಿಐಡಿ) ಅಡಿಯಲ್ಲಿ ರಚನೆಯಾಗಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಸಲ್ಲಿಸಿದ ಚಾರ್ಜ್‌ಶೀಟ್, ಇಡಿ ಚಾರ್ಜ್ ಶೀಟ್ ಗೆ ವಿರುದ್ಧವಾಗಿದೆ. ಎಸ್ಐಟಿ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ನಾಗೇಂದ್ರ ಅವರ ಹೆಸರನ್ನು ಉಲ್ಲೇಖಿಸಿಲ್ಲ ಮತ್ತು ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.