ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಇಡಿ ಮನವಿ ಮಾಡಿತ್ತು. ಅದರಂತೆ ಇಂದು (ಏಪ್ರಿಲ್ 09) ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಇದರಿಂದ ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ.