ಭೀಕರ ರಸ್ತೆ ಅಪಘಾತ: ಲಾರಿಗೆ ವ್ಯಾನ್‌ ಡಿಕ್ಕಿಯಾಗಿ ಮಗು ಸೇರಿ 6 ಸಾವು, ಮೂವರು ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ತಮಿಳುನಾಡಿನ ತಿರುಚ್ಚಿ ಜಿಲ್ಲೆಯ ತಿರುವಾಸಿ ಬಳಿಯ ತಿರುಚ್ಚಿ-ಸೇಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ವ್ಯಾನ್​ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಮಗು, ಮಹಿಳೆ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. ‌

ಗಾಯಾಳುಗಳನ್ನು ತಿರುಚ್ಚಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿರುಚ್ಚಿ ಎಸ್ಪಿ ಸುಜಿತ್ ಕುಮಾರ್ ಹೇಳಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!