ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡ ವಂಚಿತ್ ಬಹುಜನ ಅಘಾಡಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿ ಇಂದು ಶಿವಸೇನಾ ಸಂಸ್ಥಾಪಕ ದಿವಂಗತ ಬಾಳ್ ಠಾಕ್ರೆ ಅವರ ಜನ್ಮದಿನದಂದೆ ಶಿವಸೇನೆ(ಯುಬಿಟಿ) ಜೊತೆ ಮೈತ್ರಿ ಘೋಷಿಸಿವೆ.

ಇಂದು ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ ಅವರು, ತಮ್ಮ ತಾತ ಕೇಶವ್ ಠಾಕ್ರೆ ಮತ್ತು ಪ್ರಕಾಶ್ ಅಂಬೇಡ್ಕರ್ ಅವರ ಅಜ್ಜ, ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರು ಸಮಕಾಲೀನರು. ಈ ಇಬ್ಬರು ಪರಸ್ಪರ ಮೆಚ್ಚಿಕೊಂಡಿದ್ದರು ಮತ್ತು ಸಾಮಾಜಿಕ ಅನಿಷ್ಟಗಳು ಹಾಗೂ ಕೆಟ್ಟ ಆಚರಣೆಗಳನ್ನು ತೊಡೆದುಹಾಕಲು ಶ್ರಮಿಸಿದರು ಎಂದರು.

ರಾಜಕೀಯದಲ್ಲಿ ಕೆಲವು ಕೆಟ್ಟ ಆಚರಣೆಗಳಿದ್ದು, ಅವುಗಳನ್ನು ನಿರ್ಮೂಲನೆ ಮಾಡಲು, ಆ ಇಬ್ಬರು ನಾಯಕರ ವಾರಸುದಾರರು ಮತ್ತು ಅವರ ಸುತ್ತಲಿನ ಜನ ದೇಶದ ಹಿತಾಸಕ್ತಿ ಕಾಪಾಡಲು ಒಗ್ಗೂಡಿದ್ದಾರೆ.ಪ್ರಜಾಪ್ರಭುತ್ವ ಜೀವಂತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ನಾವು ಒಗ್ಗೂಡುತ್ತಿದ್ದೇವೆಎಂದು ಠಾಕ್ರೆ ಹೇಳಿದ್ದಾರೆ.

ಮುಂಬೈ ಮತ್ತು ಥಾಣೆ ಸೇರಿದಂತೆ ಮಹಾರಾಷ್ಟ್ರದ ಹಲವು ನಗರಗಳಲ್ಲಿ ಮಹಾನಗರ ಪಾಲಿಕೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ವಂಚಿತ್ ಬಹುಜನ ಅಘಾಡಿ ಮತ್ತು ಉದ್ಧವ್ ಶಿವಸೇನೆ ಮೈತ್ರಿ ಮಾಡಿಕೊಂಡಿದ್ದು, ಈ ಕುರಿತು ಮಾತನಾಡಿದ ಪ್ರಕಾಶ್ ಅಂಬೇಡ್ಕರ್ ಅವರು, ವಿಬಿಎ ಮತ್ತು ಶಿವಸೇನೆ (ಯುಬಿಟಿ) ಮೈತ್ರಿಯಿಂದ ರಾಜಕೀಯ ಬದಲಾವಣೆಯ ಪರ್ವ ಆರಂಭವಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!