ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ವಾರ ಕೊಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವಿಧ್ವಂಸಕ ಕೃತ್ಯಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾ ಪೊಲೀಸರು ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ.
ಅಮಾನತುಗೊಂಡಿರುವ ಪೊಲೀಸರಲ್ಲಿ ಇಬ್ಬರು ಸಹಾಯಕ ಪೊಲೀಸ್ ಆಯುಕ್ತರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಗಸ್ಟ್ 15 ರ ಮುಂಜಾನೆ ಕಿಡಿಗೇಡಿಗಳ ಗುಂಪು ಆಸ್ಪತ್ರೆಯೊಳಗೆ ನುಗ್ಗಿ ಅಲ್ಲಿನ ತುರ್ತು ವಿಭಾಗ, ನರ್ಸಿಂಗ್ ಸ್ಟೇಷನ್ ಮತ್ತು ಔಷಧಿ ಅಂಗಡಿಯನ್ನು ಧ್ವಂಸಗೊಳಿಸಿತ್ತು.
ಆರೋಗ್ಯ ಕೇಂದ್ರದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆ ಮಾಡಿದ ಆರೋಪದ ವಿರುದ್ಧ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ಮಹಿಳೆಯರು ಮಧ್ಯರಾತ್ರಿ ಪ್ರತಿಭಟನೆಯ ನಡುವೆ ಸರ್ಕಾರಿ ಆಸ್ಪತ್ರೆಯಲ್ಲಿ ಹಿಂಸಾಚಾರ ನಡೆದಿತ್ತು.
ಘಟನೆಗೆ ಸಂಬಂಧಿಸಿ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇಬ್ಬರು ಸಹಾಯಕ ಪೊಲೀಸ್ ಆಯುಕ್ತರು ಮತ್ತು ಒಬ್ಬರು ಇನ್ಸ್‌ಪೆಕ್ಟರ್ ಆಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.