ಹೊಸದಿಗಂತ ಡಿಜಿಟಲ್ ಡೆಸ್ಕ್
ಗುಜರಾತ್ನ ಆನಂದ್ ನಿಲ್ದಾಣದ ಬಳಿ ಮಂಗಳವಾರ ಸಂಜೆ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ 54 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಬಲಿಯಾದವರನ್ನು ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್ ಎಂದು ಗುರುತಿಸಲಾಗಿದ್ದು, ಆನಂದ್ ರೈಲ್ವೆ ನಿಲ್ದಾಣದ ಬಳಿ ಹಳಿ ದಾಟುತ್ತಿದ್ದಾಗ ಸಂಜೆ 4.37 ಕ್ಕೆ ಅಪಘಾತ ಸಂಭವಿಸಿದೆ ಎಂದು ಇಲ್ಲಿನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಹಮದಾಬಾದ್ನ ನಿವಾಸಿ ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್ ಅವರು ಆನಂದ್ನಲ್ಲಿರುವ ಸಂಬಂಧಿಕರನ್ನು ಭೇಟಿಯಾಗಲು ಬಂದಿದ್ದರು. ರೈಲು ಗಾಂಧಿನಗರ ರಾಜಧಾನಿಯಿಂದ ಮುಂಬೈ ಸೆಂಟ್ರಲ್ಗೆ ತೆರಳುತ್ತಿತ್ತು. ಇದು ಆನಂದ್ ರೈಲು ನಿಲ್ದಾಣದಲ್ಲಿ ನಿಲ್ಲುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30 ರಂದು ಗಾಂಧಿನಗರ ರಾಜಧಾನಿ ನಿಲ್ದಾಣದಿಂದ ರೈಲಿನ ಉದ್ಘಾಟನಾ ಓಟಕ್ಕೆ ಚಾಲನೆ ನೀಡಿದ್ದರು.
ಕಳೆದ ಒಂದು ತಿಂಗಳಲ್ಲಿ ಹಳಿಗಳ ಮೇಲೆ ಜಾನುವಾರುಗಳಿಗೆ ಡಿಕ್ಕಿ ಹೊಡೆದು ರೈಲು ಮೂರು ಬಾರಿ ಹಾನಿಯಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ