Vande Bharat Express | ತಮಿಳುನಾಡಿನಲ್ಲಿ ಚೆನ್ನೈ-ಮೈಸೂರು ರೈಲಿಗೆ ಕಲ್ಲು ತೂರಾಟ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ನಿರಂತರವಾಗಿ ಕಲ್ಲು ತೂರಾಟ ಘಟನೆಗಳು ವರದಿಯಾಗುತ್ತಿವೆ. ಇದೀಗ ಮತ್ತೊಂದು ಘಟನೆ  ನಡೆದಿದ್ದು , ಜು.14 ತಮಿಳುನಾಡಿನಲ್ಲಿ ನಡೆದಿದೆ.

ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದ ಪಕ್ಕದಲ್ಲಿರುವ ಬೇಸಿನ್ ಬ್ರಿಡ್ಜ್ ನಿಲ್ದಾಣದ ಬಳಿ ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ್ದರಿಂದ ರೈಲಿನ ಎರಡು ಕಿಟಕಿಗಳಿಗೆ ಹಾನಿಯಾಗಿದೆ. ಎಕ್ಸ್‌ಪ್ರೆಸ್ ರೈಲು ಮೈಸೂರಿನಿಂದ ಚೆನ್ನೈಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಈ ವರ್ಷದ ಫೆಬ್ರವರಿಯಲ್ಲಿ ಬೆಂಗಳೂರಿನ ಕಂಟೋನ್ಮೆಂಟ್ ಸ್ಟೇಷನ್ ಬಳಿ ವಂದೇ ಭಾರತ್ ರೈಲಿನ ಮೇಲೆ ದುಷ್ಕರ್ಮಿಗಳು ಇದೇ ರೀತಿಯ ಕಲ್ಲು ತೂರಾಟ ನಡೆಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!