ಶೀಘ್ರದಲ್ಲೇ ಬೆಳಗಾವಿಗೂ ಬರಲಿದೆ ‘ವಂದೇ ಭಾರತ ಎಕ್ಸ್ ಪ್ರೆಸ್’ ರೈಲು!

ಹೊಸದಿಗಂತ ವರದಿ ಬೆಳಗಾವಿ:‌ 

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರ ಬೆಳಗಾವಿಯವರೆಗೂ ವಿಸ್ತರಣೆಯಾಗಿದ್ದು, ಜಿಲ್ಲೆಯ ಜನರ ಬೇಡಿಕೆ ಈಡೇರಿದಂತಾಗಿದೆ.

ಬೆಂಗಳೂರಿನಿಂದ ಧಾರವಾಡವರೆಗೂ ಸಂಚರಿಸುತ್ತಿದ್ದ ವಂದೇ ಭಾರತ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿವರೆಗೂ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದರು.

ಬೆಳಗಾವಿಯಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಖ್ಯೆ (20661) ಬೆಳಿಗ್ಗೆ 05.45 ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು ಮಧ್ಯಾಹ್ನ 01.30 ಕ್ಕೆ ಬೆಳಗಾವಿಗೆ ಬರಲಿದೆ. ಬೆಳಗಾವಿಯಿಂದ ರೈಲು ಸಂಖ್ಯೆ (20662) ಮಧ್ಯಾಹ್ನ 02.00ಕ್ಕೆ ಬೆಳಗಾವಿಯಿಂದ ಹೊರಟು ರಾತ್ರಿ 10.10 ಕ್ಕೆ ಬೆಂಗಳೂರು ನಿಲ್ದಾಣ ತಲುಪಲಿದೆ.

ಶ್ರೀಘ್ರದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರದ ದಿನಾಂಕ ನಿಗದಿಯಾಗಲಿದೆ. ನನ್ನ ಮನವಿಗೆ ಸ್ಪಂದಿಸಿ ಶೀಘ್ರ ರೈಲಿನ ವ್ಯವಸ್ಥೆ ಮಾಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಹಾಗೂ ರೈಲ್ವೆ ಇಲಾಖೆಗೆ ಈರಣ್ಣ ಕಡಾಡಿ ಧನ್ಯವಾದಗಳನ್ನು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!