ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಉನಾದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆಸಿದ್ದರಿಂದ ರೈಲಿನ ಕನಿಷ್ಠ ನಾಲ್ಕು ಬೋಗಿಗಳಿಗೆ ಹಾನಿಯಾಗಿದೆ.
ಸದ್ಯ ರೈಲಿಗೆ ಆಗಿರುವ ಹಾನಿಯ ಪ್ರಮಾಣವನ್ನು ಅಂದಾಜು ಮಾಡಲಾಗುತ್ತಿದೆ. ಆರೋಪಿಗಳನ್ನು ಬಂಧಿಸಲು ಎಲ್ಲಾ ಅಗತ್ಯ ಪ್ರಯತ್ನಗಳು ನಡೆಯುತ್ತಿವೆ ಎಂದು ರೈಲ್ವೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.