ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಗೀತೆ ವಂದೇ ಮಾತರಂಗೆ 150 ವರ್ಷಗಳು ಪೂರ್ಣಗೊಂಡಿದ್ದು, ಈ ಹಿನ್ನೆಲೆ ಗೌರವಾರ್ಥವಾಗಿ ‘ವಂದೇ ಮಾತರಂ’ ಹಾಡಿನ ವರ್ಷಪೂರ್ತಿ ಸ್ಮರಣಾರ್ಥ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಗೌರವ ಸೂಚಿಸುವ ಸಲುವಾಗಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡುವ ಮೂಲಕ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನವದೆಹಲಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ಆಚರಣೆಯು ದೇಶದ ಅನೇಕ ನಾಗರಿಕರಿಗೆ ಹೊಸ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದರು.
ವಂದೇ ಮಾತರಂ ಭಾರತದ ಏಕತೆಯ ನಿಜವಾದ ಸಂಕೇತವಾಗಿದ್ದು, ಇದು ಎಲ್ಲಾ ಪೀಳಿಗೆಗೆ ಸ್ಫೂರ್ತಿ ನೀಡಿದೆ. ಈ ಸಂದರ್ಭದಲ್ಲಿ ನನ್ನ ಭಾರತೀಯ ಸಹೋದರ ಸಹೋದರಿಯರನ್ನು ಅಭಿನಂದಿಸುತ್ತೇನೆ. ಇಂದು ನಾವು ವಂದೇ ಮಾತರಂನ 150 ವರ್ಷಗಳನ್ನು ಆಚರಿಸುತ್ತಿರುವಾಗ, ಇದು ನಮಗೆ ಹೊಸ ಸ್ಫೂರ್ತಿ ನೀಡುತ್ತದೆ ಮತ್ತು ದೇಶದ ಜನರಲ್ಲಿ ಹೊಸ ಚೈತನ್ಯವನ್ನು ತುಂಬುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

